ಬಿಎಸ್ ವೈ ಪುತ್ರರ ಪರ ಮತ ಕೇಳಲುನಿಮ್ಮ ಆತ್ಮ ಸಾಕ್ಷಿ ಒಪ್ಪುವುದೇ?

ಮೋದಿಗೆ ಮುಖ್ಯಮಂತ್ರಿ ಸಿದ್ದರಾ,ಮಯ್ಯ ಪ್ರಶ್ನೆ

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ, ಅಮಾಯಕ ರೈತರನ್ನು ಬಲಿ ಪಡೆದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರ ಪುತ್ರರ ಪರವಾಗಿ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ  ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು,
ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ.. ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ, ಅನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಕೇಳಿದ್ದಾರೆ.

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?
ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.


Posted

in

by

Tags:

Comments

Leave a Reply

Your email address will not be published. Required fields are marked *