Mindblown: a blog about philosophy.

  • ಬಿಜೆಪಿ ನಾಯಕರ ಮೌನ ಪ್ರಶ್ನಿಸಿದ ಆಯನೂರು

    ಕೆ.ಎಸ್.ಈಶ್ವರಪ್ಪನವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವಮಾನ ಮಾಡಿದರು ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪನವರು ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಾಂದ್ಲಾಜೆ ಇರುತ್ತಾಳೆ ಎಂದು ಅಪಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಇಂತಹ ಮಾತನಾಡಿದರು ಕೂಡ ಯಾರೂ ಈ ಬಗ್ಗೆ ಪ್ರಶ್ನೆ ಮಾಡಲಿಲ್ಲ.…

  • ಪ್ರಧಾನಿ ಮೋದಿ ಸಮಾವೇಶಕ್ಕೆ ಆಯನೂರು ಮಂಜುನಾಥ್ ಲೇವಡಿ

    ಶಿವಮೊಗ್ಗ ನಗರದಲ್ಲಿ ಮಾ.೧೮ ರಂದು ಬಿಜೆಪಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯ ಸಮಾವೇಶವನ್ನು ʼಅದೊಂದು ರಾಜಕೀಯ ಜಾತ್ರೆ, ಅದರಿಂದ ಶಿವಮೊಗ್ಗ ಜಿಲ್ಲೆಗೆ ನಯಾಪೈಸೆದಷ್ಟು ಲಾಭವಾಗಿಲ್ಲʼ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಜರಿದಿದ್ದಾರೆ. ಮಂಗಳವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರ ಶಿವಮೊಗ್ಗ ಭೇಟಿ ತಮಗೆ ತುಂಬಾ ನಿರಾಸೆ ತಂದಿದೆ. ಯಾಕೆಂದರೆ  ನಮ್ಮ ಜಿಲ್ಲೆಗೆ ಅವರು ಬಂದು ‌ಹೋದರು ಎನ್ನುವುದಷ್ಟೆ ಲಾಭವೇ ಹೊರತು ಬೇರೆನು ಆಗಿಲ್ಲ. ಜಿಲ್ಲೆಯಲ್ಲಿ ಅನೇಕ…

  • ಶಿವಮೊಗ್ಗಕ್ಕೆ ಬುಧವಾರ ಗೀತಾ ಶಿವರಾಜ್‌ ಕುಮಾರ್‌ : ಭವ್ಯ ಸ್ವಾಗತ ನೀಡಲು ಸಜ್ಜಾದ ಕೈ ಪಡೆ

    ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಮಾ.೨೦ ರಂದು ಬುಧವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ಟಿಕೆಟ್‌ ಘೋಷಣೆಯಾದ ನಂತರ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದು,  ಅವರಿಗೆ ಭವ್ಯ ಸ್ವಾಗತ ಕೋರಲು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಜ್ಜಾಗಿದೆ. ಅಧಿಕೃತವಾಗಿ ಟಿಕೆಟ್‌ ಘೋಷಣೆಯಾಗಿಯೂ ಕ್ಷೇತ್ರಕ್ಕೆ ಕಾಲಿಡದ ಗೀತಾ ಶಿವರಾಜ್‌ ಕುಮಾರ್‌ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳೇ ನಡೆದಿದ್ದವು. ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯೇ ಇಲ್ಲ ಎನ್ನುವಂತಹ ಮಾತುಗಳು ಕೂಡ ಕೇಳಿ ಬಂದಿದ್ದವು. ಈ…

  • ತಂಗಿಯ  ಗೆಲುವಿಗಾಗಿ ʼಮೌನʼ ಎನ್ನುವ ಅಪಪ್ರಚಾರಕ್ಕೆ ಬ್ರೇಕ್‌ ಹಾಕಿದ ಹಾಕಿದ ಕುಮಾರ್‌ ಬಂಗಾರಪ್ಪ

    ಬಹು ದಿನಗಳ ಅಜ್ಞಾತವಾಸಕ್ಕೆ ವಿದಾಯ ಹೇಳಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಕೊನೆಗೂ ಬಿಜೆಪಿಯಲ್ಲಿಯೇ ಕಾಣಿಸಿಕೊಂಡಿರುವುದು ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಲವು ಉಹಾಪೋಹಗಳಿಗೆ ಆ ಮೂಲಕ ಬ್ರೇಕ್‌ ಬಿದ್ದಿದೆ. ಜತೆಗೆ ಅಪಪ್ರಚಾರಗಳಿಗೆ ತೆರೆ ಬಿದ್ದಂತಾಗಿದೆ. ಈಗ ಕುಮಾರ್‌ ಬಂಗಾರಪ್ಪ ಬಿಜೆಪಿಯೇ ಇದ್ದು, ಆ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆನ್ನುವುದು ಖಚಿತವಾಗಿದೆ. ಮಾ.೧೮ ರಂದು ಸೋಮವಾರ ಅವರು ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲು ಕುಮಾರ್‌ ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನದಲ್ಲಿನ ವೇದಿಕೆ…

  • ಬಿಎಸ್ ವೈ ಪುತ್ರರ ಪರ ಮತ ಕೇಳಲುನಿಮ್ಮ ಆತ್ಮ ಸಾಕ್ಷಿ ಒಪ್ಪುವುದೇ?

    ಮೋದಿಗೆ ಮುಖ್ಯಮಂತ್ರಿ ಸಿದ್ದರಾ,ಮಯ್ಯ ಪ್ರಶ್ನೆ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ, ಅಮಾಯಕ ರೈತರನ್ನು ಬಲಿ ಪಡೆದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರ ಪುತ್ರರ ಪರವಾಗಿ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ  ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು,ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ…

  •  ಹೋರಾಟ ನೆಲದಿಂದ ಚುನಾವಣಾ ರಣಕಹಳೆ ಮೊಳಗಿಸಿದ ಪ್ರಧಾನಿ

    ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ಮೊದಲ ಬಾರಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದಲೇ ಸೋಮವಾರ ಅಧಿಕೃತವಾಗಿ ಚುನಾವಣಾ ಪ್ರಚಾರ ಭಾಷಣ ಮಾಡುವ ಮೂಲಕ ರಣಕಹಳೆ ಮೊಳಗಿಸಿದರು. ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೇರಿದ್ದ ಅಪಾರ ಸಂಖ್ಯೆಯ ಜನಸ್ತೋಮವನ್ನುದ್ದೇಸಿ ಬಹಿರಂಗ ಭಾಷಣ ಮಾಡಿದ ಅವರು,   ದೇಶದ ಹಿತಕ್ಕಾಗಿ ಕರ್ನಾಟಕದ ೨೮ ಸ್ಥಾನಗಳು ಸೇರಿ ಬಿಜೆಪಿಗೆ ೪೦೦ ಕ್ಕೂ ಹೆಚ್ಚು ಸ್ಥಾನಗಳು ಬೇಕಾಗಿದೆ. ಇಷ್ಟನ್ನು ನೀವು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ರಾಜ್ಯ…

  • ಮಲೆನಾಡಿನಲ್ಲಿ ಮೋದಿ ಮೇನಿಯಾ -ಹರಿದು ಬಂದಿದ್ದ ಜನಸ್ತೋಮ

    ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಿವಮೊಗ್ಗದಿಂದಲೇ ಪಕ್ಷದ ಪ್ರಥಮ ಚುನಾವಣಾ ಪ್ರಚಾರ ಆರಂಭಿಸಿದರು.ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಸೇರಿದ್ದ ಭಾರೀ ಜನಸ್ತೋಮದ ನಡುವೆ ಅವರು ಕಾಂಗ್ರೆಸ್‌ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕವೇ ಚುನಾವಣಾ ಪ್ರಚಾರ ಭಾಷಣಕ್ಕೆ ನಾಂದಿ ಹಾಡಿದರು. ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ ಬೆನ್ನಲ್ಲೇ ಕಲ್ಬುರ್ಗಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಪ್ರಧಾನಿ ಇಂದು ಶಿವಮೊಗ್ಗದಲ್ಲೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡರು. ಪ್ರಧಾನಿ ಪ್ರಚಾರದ…

  • ಮೋದಿ ಭೇಟಿಯಿಂದ ದೂರ ಉಳಿದ ಈಶ್ವರಪ್ಪ :ಬಂಡಾಯ ಸ್ಪರ್ಧೆಯನ್ನು ಇನ್ನಷ್ಟು ಖಚಿತಪಡಿಸಿದರೇ?

    ಲೋಕಸಭೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸೋಮವಾರ ನಗರದಲ್ಲಿ ಹಮ್ಮಿಕೊಂಡಿರುವ ಪ್ರಧಾನಿ ಮೋದಿ ಸಮಾವೇಶದಿಂದ ದೂರ ಉಳಿದಿದ್ದಾರೆ.ಈಶ್ವರಪ್ಪ ಮನವೊಲಿಸುವ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಪ್ರಯತ್ನ, ಆರ್.ಎಸ್.ಎಸ್. ನಾಯಕರ ವಿಫಲಗೊಂಡಿದೆ.ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುತ್ತಿದ್ದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವುದು ಮಾಜಿ ಸಿಎಂ…

  • ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಅಂದಿದ್ದೇಕ್ಕೆ ವಿಜಯೇಂದ್ರ ?

    ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರ ಸಮಾವೇಶದಿಂದ ರಾಜ್ಯಕ್ಕೆ ಒಂದು ಉತ್ತಮ ಸಂದೇಶ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕೈಗೊಂಡಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಇದೆ. ದೊಡ್ಡ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ. ರಾಜ್ಯಕ್ಕೆ ಒಂದು ಉತ್ತಮ ಸಂದೇಶ ಹೋಗಲಿದೆ ಎಂದರು.ಈಶ್ವರಪ್ಪನವರು ಹಿರಿಯರಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿಜೆಪಿ ರಾಜ್ಯಾದ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ…

  • ಮೋದಿ ಮತ್ತೆ ಪ್ರಧಾನಿಯಾಗಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್

    ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಘಟಕ ಹಮ್ಮಿಕೊಂಡಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಮೋದಿ ಅವರ…

Got any book recommendations?