Friday, December 20, 2024
Google search engine
HomeUncategorizedಮತ ಎಣಿಕೆಗೆಸಹ್ಯಾದ್ರಿ ಕಾಲೇಜು ಸಜ್ಜು, ಮತ ಎಣಿಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ?

ಮತ ಎಣಿಕೆಗೆಸಹ್ಯಾದ್ರಿ ಕಾಲೇಜು ಸಜ್ಜು, ಮತ ಎಣಿಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ?

ಶಿವಮೊಗ್ಗ : ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜು ಸಿದ್ದವಾಗಿದೆ. ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯ ಸಿದ್ದತೆ ನಡೆಸಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಶುರುವಾಗಲಿದೆ.ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಒಟ್ಟು 1752885 ಮತದಾರರಿದ್ದು, ಇದರಲ್ಲಿ ಒಟ್ಟು 1372949 ಮತ ಚಲಾವಣೆಯಾಗಿದೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಮತ ಎಣಿಕೆಯ ಭದ್ರತೆಗಾಗಿಯೇ ಜಿಲ್ಲಾ ಪೊಲೀಸ್‌ ಇಲಾಖೆಯು ೧ ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮತ ಎಣಿಕೆ ಆವರಣದ ಸುತ್ತಮುತ್ತ ಸೆಕ್ಷನ್ 144 ನ್ನು ಜಾರಿ ಮಾಡಲಾಗಿದೆ .

ಮತ ಎಣಿಕೆ ಬೆಳಗ್ಗೆ ೮ ಗಂಟೆಗೆ ಶುರುವಾಗಲಿದೆ., ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ಗಳು ಇರುತ್ತದೆ. ಮತ ಎಣಿಕೆ ಟೆಬಲ್ ಕೌಂಟರ್‍ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments