ನಟ ಅನಿರುದ್ಧ್ ಜತ್ಕರ್ ಹೊಸ ಅವತಾರ ತಾಳಿದ್ದಾರೆ. ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “chef ಚಿದಂಬರ”ದಲ್ಲಿ ನಟ ಅನಿರುದ್ದ್ ಜತ್ಕರ್ ಅವರುನಾಯಕನಟನಾಗಿ ಕಾಣಿಸಿಕೊಂಡಿದ್ದು, ಆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅದೀಗ ಅಪಾರ ಮೆಚ್ಚುಗೆಗೂ ಕಾರಣವಾಗಿದೆ.
ಖ್ಯಾತ ನಟ ರಮೇಶ್ ಅರವಿಂದ್ ಟ್ರೇಲರ್ ಬಿಡುಗಡೆ ಮಾಡಿ, ಮೆಚ್ಚುಗೆ ದೊರಕುತ್ತಿದ್ದು, ಇದೇ ಜೂನ್ 14 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.
ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ಮಾಪಕಿ ರೂಪ ಡಿ ಎನ್ ಅವರು ನಮ್ಮ ಚಿತ್ರವನ್ನು ಎಲ್ಲರು ನೋಡಿ. ಪ್ರೋತ್ಸಾಹ ನೀಡಿ ಎಂದರು.
ಚಿತ್ರದ ನಾಯಕಿಯರಾದ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್ ಅವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಶಿವಮಣಿ ಅವರು ನಿರ್ದೇಶಕರೊಟ್ಟಿಗೆ ವಿಭಿನ್ನವಾಗಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಛಾಯಾಗ್ರಾಹಕ ಉದಯ್ ಲೀಲ, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಸಂಭಾಷಣೆ ಬರೆದಿರುವ ಗಣೇಶ್ ಪರಶುರಾಮ್ ಸೇರಿದಂತೆ ಮುಂತಾದ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.