Saturday, December 21, 2024
Google search engine
HomeUncategorizedಮೋದಿ ಮತ್ತೆ ಪ್ರಧಾನಿಯಾಗಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್

ಮೋದಿ ಮತ್ತೆ ಪ್ರಧಾನಿಯಾಗಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌
ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಘಟಕ ಹಮ್ಮಿಕೊಂಡಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಮೋದಿ ಅವರ ನಾಯಕತ್ವದಲ್ಲಿ ದೇಶ ಮುನ್ನಡೆಯಬೇಕು ಅನ್ನೋದು ಕೋಟ್ಯಂತರ ಭಾರತೀಯರ ಅಭಿಲಾಷೆ. ಈಗಾಗಲೇ ದೇಶದಾದ್ಯಂತ ಮೋದಿ ಅಲೆ ಜೋರಾಗಿದೆ ಎಂದರು‌.
ರಾಜಕಾರಣಕ್ಕೆ ನಮ್ಮ ಕುಟುಂಬ‌ ಹೊಸದೇನಲ್ಲ. ನಮ್ಮ ಮಾವನವರಾದ ಮಲ್ಲಿಕಾರ್ಜುನಪ್ಪ, ನನ್ನ ಪತಿ ಸಿದ್ದೇಶ್ವರ್ ಅವರು ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಚುನಾವಣೆ ವೇಳೆ ನಾನೂ ಕ್ಷೇತ್ರದಲ್ಲಿ ಓಡಾಡಿದ್ದರಿಂದ ಕ್ಷೇತ್ರದ ಮತ್ತು ಜನರ ಪರಿಚಯ ಚನ್ನಾಗಿದೆ. ನನಗೆ ಟಿಕೆಟ್ ಸಿಗುತ್ತದೆ ಎಂಬ ಕಲ್ಪನೆಯೂ ಇರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿಯಲ್ಲಿ ದಾವಣಗೆರೆ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಮನೆಯಲ್ಲೇ ಕೂತು ಮತ ತೆಗೆದುಕೊಳ್ಳುತ್ತಾರೆ. ಗೆದ್ದ ಬಳಿಕ ಜನರ ಕೈಗೂ ಸಿಗುವುದಿಲ್ಲ,ಅಭಿವೃದ್ಧಿ ಕೆಲಸಗಳೂ ಆಗುವುದಿಲ್ಲ. ಹೀಗಾಗಿ ಜನ ಬಿಜೆಪಿ ಕಡೆ ಒಲವು ತೋರುತ್ತಿದ್ದಾರೆ ಎಂದರು. ‌
ಸಂಸದ ಜಿ.ಎಂ.ಸಿದ್ದೇಶ್ವರ್ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ 3500 ಕೋಟಿ ಅನುದಾನ ನೀಡಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಜಾಗತಿಕ ಮಟ್ಟದಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಅವರ ಆಡಳಿತದಲ್ಲಿ 2047 ರ ಒಳಗೆ ಭಾರತ ಜಗತ್ತಿನಲ್ಲೇ ಮೊದಲ ಸ್ಥಾನ ಪಡೆದುಕೊಳ್ಳಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments